ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ವಿಜ್ಞಾನಮೇಳ-2025 ಇದರ ಸಂಘಟಕ ಸಮಿತಿ ರಚನಾ ಸಭೆ ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳವಾರ ನಡೆಯಿತು. ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ ಎಸ್. ಸಭೆ ಉದ್ಘಾಟಿಸಿದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಜಾರ್ಜ್ ಕ್ರಾಸ್ತಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಥಳೀಯ ವಾರ್ಡ್ ಸದಸ್ಯೆ ಆಶಾಲತಾ. ಎ, ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಸದಸ್ಯೆ ಮಮತ, ಜಿಲ್ಲಾ ಪಂಚಾಯತಿ ಸದಸ್ಯೆ ಕಮಲಾಕ್ಷಿ, ಜಿಲ್ಲಾ ಪ್ರಾಂಶುಪಾಲರ ವೇದಿಕೆ ಕಾರ್ಯದರ್ಶಿ ರಮೇಶ್ ಕೆ.ಎನ್. ಶುಭಾಶಂಸನೆಗೈದರು.
ಶಾಲಾ ಮುಖ್ಯೋಪಾಧ್ಯಾಯನಿ ಕೃಷ್ಣವೇಣಿ ವಿಜ್ಞಾನ ಮೇಳದ ಸಂಘಟಕ ಸಮಿತಿಯ ಕರಡು ಪ್ರತಿಯನ್ನು ಮಂಡಿಸಿದರು. ಜಿಲ್ಲಾ ಮುಖ್ಯೋಪಾಧ್ಯಾಯರ ವೇದಿಕೆಯ ಕಾರ್ಯದರ್ಶಿ ಶ್ಯಾಮ್ ಭಟ್ ವಿಜ್ಞಾನ ಮೇಳದ ಮುಂಗಡ ಪತ್ರವನ್ನು ಮಂಡಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆ ವಹಿಸಿದ್ದರು. ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ವಿಜಯಕುಮಾರ್ ಸ್ವಾಗತಿಸಿ, ಎ.ಯು.ಪಿ. ಶಾಲಾ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ಭಟ್ ವಂದಿಸಿದರು. ರಾಕೇಶ್ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.




