ಕಾಸರಗೋಡು: ಅನಂತಪುರಿ ಗಡಿನಾಡ ಕನ್ನಡ ಸಂಸ್ಕøತಿಕ ಉತ್ಸವ ಆ. 23ರಂದು ತಿರುವನಂತಪುರಂನ ತೈಕ್ಕಾಡಿನಲ್ಲಿರುವ ಭಾರತ್ ಭವನ ಸಭಾಂಗಣದಲ್ಲಿ ಜರುಗಲಿದೆ. ಕರ್ನಾಟಕ ಸರ್ಕಾರದ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮತ್ತು ಕೇರಳ ಸರ್ಕಾರದ ತಿರುವನಂತಪುರದ ಭಾರತ್ ಭವನ್ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಜರುಗಲಿದೆ.
ಅಂದು ಬೆಳಗ್ಗೆ 10ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಿ.ಆರ್.ಅನಿಲ್ ಉದ್ಘಾಟಿಸುವರು.
ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುವರು. ಭಾರತ್ ಭವನ ಕಾರ್ಯದರ್ಶಿ ಪ್ರಮೋದ್ ಪಯ್ಯನ್ನೂರ್, ಹಿರಿಯ ವಿದ್ವಾಂಸ ವೀರಣ್ಣ ತುಪ್ಪದ, ಅಹಮ್ಮದಾಬಾದ್ ಕನ್ನಡ ಸಂಘದ ಅಧ್ಯಕ್ಷ ಹಣಮಂತ ಬೆನ್ನೂರ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎಂ.ಎಸ್.ಮದಭಾವಿ, ಅಶೋಕ ಚಂದರಗಿ, ಶಿವರೆಡ್ಡಿ ಖ್ಯಾಡೇದ, ತಿರುವನಂತಪುರ ಮಾದ್ವ ಮಹಿಳಾ ಮಂಡಳಿ ಅಧ್ಯಕ್ಷೆ ಡಾ.ರುಕ್ಮಿಣಿ ಕೆ., ಕಾರ್ಯದರ್ಶಿ ಡಾ.ಅನಿತಾ ಕುಮಾರಿ ಹೆಗಡೆ, ಧಾರ್ಮಿಕ ಮುಂದಾಳು ಗೋಪಾಲ ಶೆಟ್ಟಿ ಅರಿಬೈಲು, ಮಂಜುನಾಥ ಆಳ್ವ ಮಡ್ವ, ಕೇರಳ ಪಿಎಸ್‍ಸಿ ನಿವೃತ್ತ ಅಂಡರ್ ಸೆಕ್ರಟರಿ ಗಣೇಶ್ ಪ್ರಸಾದ್ ಪಾಣೂರು, ಮಾದ್ವ ತುಳು ಬ್ರಾಹ್ಮಣ ಸಮಾಜದ ಅಧ್ಯಕ್ಷ ಸೂರ್ಯನಾರಾಯಣ ಕುಂಜುರಾಯ, ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಎನ್.ಚನಿಯಪ್ಪ ನಾಯ್ಕ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.
ಈ ಸಂದರ್ಭ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸಂಸ್ಥಾಪಕ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅವರು ಸಾಧಕರನ್ನು ಸನ್ಮಾನಿಸುವರು. ಮಧ್ಯಾಹ್ನ 12ರಿಂದ ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿ ಸಂಗಮ ನಡೆಯಲಿದೆ. 1 ಗಂಟೆಯಿಂದ ಕನ್ನಡ, ಮಲೆಯಾಳ, ತುಳು ಜಾನಪದ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. 2ರಿಂದ ಬಹುಭಾಷಾ ಸಮಾಜದಲ್ಲಿ ಸಹಬಾಳ್ವೆ ಮತ್ತು ಸಂವಹನ ವಿಷಯದ ವಿಚಾರಗೋಷ್ಠಿಯಲ್ಲಿ ಸಾಹಿತಿ, ಸಂಶೋಧಕಿ ಡಾ.ಮೀನಾಕ್ಷಿ ರಾಮಚಂದ್ರ ಅಧ್ಯಕ್ಷತೆ ವಹಿಸುವರು. 3ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಸೋಮಣ್ಣ ಬೀವಿನಮರದ ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ಶಿವಾನಂದ ಕೋಟ್ಯಾನ್ ಕಟಪಾಡಿ ಅವರು ಬರೆದ ಗುರುದರ್ಶನ ಕೃತಿಯನ್ನು ಕೇರಳ ಶಿಕ್ಷಣ ಖಾತೆ ಸಚಿವ ಶಿವನ್ ಕುಟ್ಟಿ ಬಿಡುಗಡೆಗೊಳಿಸುವರು. ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಭಗತ್ ರಾಜ್ ನಿಜಾಮಕರಿ, ಡಾ.ಸಂಜೀವ್ ಕುಮಾರ್ ಅತಿವಾಲೆ, ತಿರುವನಂತಪುರಂ ಕರ್ನಾಟಕ ಸಂಘದ ಅಧ್ಯಕ್ಷೆ ಭಾನುಮತಿ ಶೆಟ್ಟಿ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕಾಧ್ಯಕ್ಷ ಡಾ.ಮಲ್ಲಿಕಾರ್ಜುನ ಎಸ್.ನಾಸಿ., ಯೋಜನಾ ವಿಜ್ಞಾನಿ ಡಾ.ಇಬ್ರಾಹಿಂ ಬಾತಿಸ್ ಕೆ., ಶಶಿಧರ ಶೆಟ್ಟಿ ಮುಟ್ಟ, ಕೆ.ಜಿ.ಕೆ.ಕಿಶೋರ್, ಪ್ರವೀಣ್ ಕುಮಾರ್ ಕೊಡಿಯಾಲಬೈಲು, ಸರಿನ್ ಮೊಹಮ್ಮದ್, ಅನಂತಪುರಿ ಗಡಿನಾಡ ಸಂಸ್ಕøತಿ ಉತ್ಸವದ ಪ್ರಧಾನ ಸಂಚಾಲಕ ಎ.ಆರ್.ಸುಬ್ಬಯ್ಯಕಟ್ಟೆ, ಝಡ್.ಎ.ಕಯ್ಯಾರ್, ರವಿ ನಾಯ್ಕಾಪು ಮುಖ್ಯ ಅತಿಥಿಗಳಾಗಿರುವರು.
ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವೀರಗಾಸೆ, ಚಿಲಿಪಿಲಿ ಕುಣಿತ, ಜಾನಪದ ನೃತ್ಯ, ಶಾಸ್ತ್ರೀಯ ನೃತ್ಯ, ಕಥಕ್ ನೃತ್ಯ, ಮೋಹಿನಿಯಾಟ್ಟಂ, ಭರತನಾಟ್ಯ, ಯಕ್ಷಗಾನ ಹಾಗೂ ಕಥಕ್ಕಳಿ ಪ್ರದರ್ಶನ ನಡೆಯುವುದು.








