HEALTH TIPS

ಉತ್ತರಾಖಂಡದಲ್ಲಿ ಮೇಘಸ್ಫೋಟ | ಕೇರಳ ಮೂಲದ 28 ಮಂದಿ ಪ್ರವಾಸಿಗರು ನಾಪತ್ತೆ

ಕೊಚ್ಚಿ: ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ದಿಢೀರ್‌ ‍ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಕೇರಳ ಮೂಲದ 28 ಮಂದಿ ಪ್ರವಾಸಿರು ನಾಪತ್ತೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಬುಧವಾರ ತಿಳಿಸಿದ್ದಾರೆ.

ನಾಪತ್ತೆಯಾಗಿರುವ ಕೇರಳ ಮೂಲದ 28 ಜನರ ಪೈಕಿ 20 ಜನರು ಮಹಾರಾಷ್ಟ್ರದಲ್ಲಿ ನೆಲೆಸಿದ್ದಾರೆ ಎಂದು ವರದಿಯಾಗಿದೆ.

ಉಳಿದ ಎಂಟು ಮಂದಿ ಕೇರಳದ ವಿವಿಧ ಜಿಲ್ಲೆಯವರು ಎಂದು ಕಾಣೆಯಾದ ಪ್ರವಾಸಿಗರ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿದ್ದಾರೆ.

ನಾಪತ್ತೆಯಾದ ಪ್ರವಾಸಿಗರ ಪೈಕಿ ದಂಪತಿಯೊಬ್ಬರ ಮಗ ಪ್ರತಿಕ್ರಿಯಿಸಿದ್ದು, ಒಂದು ದಿನದ ಹಿಂದೆ ಕೊನೆಯ ಬಾರಿಗೆ ಅವರೊಂದಿಗೆ ಮಾತನಾಡಿದ್ದೆ. ಆ ದಿನ ಬೆಳಿಗ್ಗೆ 8.30ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ಹೊರಟಿದ್ದೇವೆ ಎಂದು ಹೇಳಿದ್ದರು. ಅವರು ಹೊರಟಿದ್ದ ಮಾರ್ಗಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಆಗಿನಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಬಾಂಬೆ ಹೈಕೋರ್ಟ್‌ ನ್ಯಾಯಾಧೀಶೆಯಾಗಿ BJP ವಕ್ತಾರೆ ನೇಮಕ: ಕಾಂಗ್ರೆಸ್, NCP ಕಿಡಿಬೆಂಗಳೂರು | ನಮ್ಮ ಮೆಟ್ರೊ: ಹಳದಿ ಮಾರ್ಗದಲ್ಲಿ ಯಾವೆಲ್ಲಾ ನಿಲ್ದಾಣಗಳಿವೆ?

10 ದಿನಗಳ ಉತ್ತರಾಖಂಡ ಪ್ರವಾಸವನ್ನು ಆಯೋಜಿಸಿದ್ದ ಹರಿದ್ವಾರ ಮೂಲದ ಪ್ರಯಾಣ ಸಂಸ್ಥೆಗೂ ಸಹ ಕಾಣೆಯಾದ ಪ್ರವಾಸಿಗರ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಾಗಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ

ಮೇಘಸ್ಫೋಟ ಪರಿಣಾಮ ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ದಿಢೀರ್‌ ಪ್ರವಾಹ ಸಂಭವಿಸಿದ್ದು, ಐವರು ಮೃತಪಟ್ಟು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಧರಾಲಿಯಲ್ಲಿ ಬುಧವಾರವೂ ಭಾರಿ ಮಳೆ ಮುಂದುವರಿದಿದೆ. ಮಳೆ ನಡುವೆಯೇ ಮಂಗಳವಾರ ಸಂಭವಿಸಿದ ಹಠಾತ್‌ ಪ್ರವಾಹದಲ್ಲಿ ಕೊಚ್ಚಿ ಹೋಗಿ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

'ನಾಪತ್ತೆಯಾದವರಲ್ಲಿ 11 ಯೋಧರು ಸೇರಿದ್ದಾರೆ' ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries