HEALTH TIPS

344 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಿದ ಚುನಾವಣಾ ಆಯೋಗ

ನವದೆಹಲಿ: 2019ರಿಂದ ಈಚೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯ ಮಾನದಂಡಗಳನ್ನು ಪೂರೈಸಲು ವಿಫಲವಾದ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಿರುವುದಾಗಿ ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಈ ಪಕ್ಷಗಳು ಕಳೆದ ಆರು ವರ್ಷಗಳಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಹಾಗೂ ಭೌತಿಕವಾಗಿ ಎಲ್ಲಿಯೂ ಕಚೇರಿಗಳನ್ನು ಹೊಂದಿಲ್ಲ.

ಮಾನ್ಯತೆ ಪಡೆಯದ ಇಂತಹ ಇನ್ನೂ 2,520 ರಾಜಕೀಯ ಪಕ್ಷಗಳು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿವೆ ಎಂದು ಆಯೋಗ ತಿಳಿಸಿದೆ.

ಸದ್ಯ 6 ರಾಷ್ಟ್ರೀಯ ಪಕ್ಷಗಳು ಮತ್ತು 67 ಪ್ರಾದೇಶಿಕ ಪಕ್ಷಗಳು ದೇಶದಲ್ಲಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries