ಕುಂಬಳೆ: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರದ ವತಿಯಿಂದ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಪುಸ್ತಕ ವಿತರಣೆ ಸಮಾರಂಭ ಆ.4 ರಂದು ಸೋಮವಾರ ಬೆಳಿಗ್ಗೆ 10.ರಿಂದ ನಾರಾಯಣಮಂಗಲ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ ಕುಮಾರ್ ಕಲ್ಕೂರ ಉಪಸ್ಥಿತರಿರುವರು. ಪುತ್ತಿಗೆ ಗ್ರಾಮಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ಆಳ್ವ, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ, ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ ಆಳ್ವ ಮಡ್ವ, ಕ.ಸಾ.ಪ.ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಸಮಾಜ ಸೇವಕ ಅರಿಬೈಲು ಗೋಪಾಲ ಶೆಟ್ಟಿ, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕಾನ ಮಠದ ಅರ್ಚಕ ಕೇಶವ ಪ್ರಸಾದ ಭಟ್ ನಾಣಿಹಿತ್ಲು, ಪತ್ರಕರ್ತ, ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ಯಕ್ಷಗಾನ ಕಲಾವಿದ, ಪ್ರವಚನಕಾರ ಮುರಳೀಧರ ಯಾದವ ನಾಯ್ಕಾಪು, ಕಾಸರಗೋಡು ಸರ್ದಾರ್ ಪಟೇಲ್ ಸಾಂಸ್ಕøತಿಕ ಸಂಘದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಕುಂಬ್ಳೆ, ನಾರಾಯಣಮಂಗಲ ಆದಿತ್ಯ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ನಾರಾಯಣಮಂಗಲ ಉಪಸ್ಥಿತರಿರುವರು. ಹರಿದಾಸ್ ಜಯಾನಂದ ಕುಮಾರ್ ಹೊಸದುರ್ಗ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾರ್ಯದರ್ಶಿ ಅಖೀಲೇಶ್ ನಗುಮುಗಂ ಮೊದಲಾದವರು ನೇತೃತ್ವ ನೀಡುವರು.






