ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ಇದರ ಆಶ್ರಯದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕೈಲಾಸ ಕಲ್ಯಾಣ ಮಂಟಪದಲ್ಲಿ 43 ನೇ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಜರಗಿತು.
ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ವಿ.ಎಚ್.ಪಿ ಮಾತೃ ಮಂಡಳಿ ಅಧ್ಯಕ್ಷೆ ಶಾರದಾ ಎಸ್ ರಾವ್ ಅಧ್ಯಕ್ಷತೆ ವಹಿಸಿದ್ದರು ಮಾಲತಿ ಮಾಧವ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಗಿಸಿ ಮಾಥನಾಡಿ, ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಮಹತ್ವ ಅರಿತು ಪೂಜೆ ನಡೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಪ್ರಸಕ್ತ ಕಾಲಘಟ್ಟದಲ್ಲಿ ಹೆಣ್ಣುಮಕ್ಕಳು ಪ್ರಜ್ಞಾವಂತರಾಗಿ ಧಾರ್ಮಿಕ ಆಚರಣೆಯಲ್ಲಿ ತೊಡಗಿಕೊಂಡು, ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕೆ ಬದ್ಧರಾಗಬೇಕು ಎಂದು ತಿಳಿಸಿದರು. ಮಾತೃ ಮಂಡಳಿ ಗೌರವಾಧ್ಯಕ್ಷೆ ಸವಿತಾ ಟೀಚರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಸೌಮ್ಯ ಶಂಕರನಾರಾಯಣ ಹೊಳ್ಳ ಅವರು ವರದಿ ವಾಚಿಸಿದರು. ಶ್ರೀದೇವಿ ರಾವ್ ಸ್ವಾಗತಿಸಿದರು. ಸವಿತಾ ಕಿಶೋರ್ ಕಾರ್ಯಕ್ರಮ ನಿರೂಪಿಸಿದರು. ಅರುಣಾ ರಾಮಕೃಷ್ಣ ಹೊಳ್ಳ ವಂದಿಸಿದರು.
ಮಹಿಳೆಯರು ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮ ಪಠಣ ಮಾಡಿದರು. ಬಳಿಕ ಪುರೋಹಿತ ಶ್ರೀ ವೆಂಕಟೇಶ ಭಟ್ ಅವರ ನೇತೃತ್ವದಲ್ಲಿ ಮಹಾಪೂಜೆ ಜರಗಿತು.
ಈ ಸಂದರ್ಭ ವಿ.ಎಚ್.ಪಿ. ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷರಾದ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ , ಉಪಾಧ್ಯಕ್ಷ ಕೆ.ಎನ್. ರಾಮಕೃಷ್ಣ ಹೊಳ್ಳ ಧಾರ್ಮಿಕ ನೇತಾರರಾದ ದೇವದಾಸ್ ನುಳ್ಳಿಪ್ಪಾಡಿ, ಜಯರಾಮ್ ಶಟ್ಟಿ, ಕಿಶೋರ್ ಕುಮಾರ್, ರವಿ ಕೇಸರಿ ಮೊದಲಾದವರು ಉಪಸ್ಥಿತರಿದ್ದರು.


