ಬೆಂಗಳೂರು: 'ಆಪರೇಷನ್ ಸಿಂಧೂರ' ವೇಳೆ ಭಾರತವು ಪಾಕಿಸ್ತಾನದ 6 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ವಾಯುಪಡೆ ಅಧಿಕೃತವಾಗಿ ದೃಢಪಡಿಸಿದೆ.
ಭಾರತೀಯ ವಾಯುಪಡೆಯ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದರು.
ಪಾಕಿಸ್ತಾನದ 6 ಯುದ್ಧ ವಿಮಾನಗಳ ಪೈಕಿ ಒಂದು ಕಣ್ಗಾವಲು ವಿಮಾನವನ್ನು (AEW&CS) ಹೊಡೆದುರುಳಿಸಲಾಗಿದೆ ಎಂದು ಅವರು ತಿಳಿಸಿದರು.
'ಆಪರೇಷನ್ ಸಿಂಧೂರ'ದಲ್ಲಿ ಪಾಕಿಸ್ತಾನದ ಯುದ್ಧ ವಿಮಾನಗಳ ನಷ್ಟದ ಬಗ್ಗೆ ಭಾರತೀಯ ವಾಯುಪಡೆಯಿಂದ ಬಂದ ಮೊದಲ ಅಧಿಕೃತ ಪ್ರತಿಕ್ರಿಯೆ ಇದಾಗಿದೆ.




