ಕಾಸರಗೋಡು: ಚಿನ್ಮಯ ವಿದ್ಯಾಲಯ ಕಾಸರಗೋಡಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೇರಳ ಚಿನ್ಮಯ ಮಿಷನಿನ ಮುಖ್ಯಸ್ಥ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಅಧ್ಯಕ್ಷ ಸ್ವಾಮಿ ವಿವಿಕ್ತಾನಂದ ಸರಸ್ವತಿ ಅವರು ಧ್ವಜಾರೋಹಣವನ್ನು ನಿರ್ವಹಿಸಿದರು. ಶಾಲಾ ಪ್ರಾಂಶುಪಾಲ ಟಿ.ವಿ ಸುಕುಮಾರನ್ ಈ ಸಂದರ್ಭದಲ್ಲಿ ಮಾತನಾಡಿ ನಮ್ಮ ದೇಶಕ್ಕೆ ದೊರೆತಿರುವಂತಹ ಅಮೂಲ್ಯವಾದ ಈ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ದೇಶಕ್ಕೆ ಬೇಕಾಗಿ ಸೇವೆಯನ್ನು ಸಲ್ಲಿಸಬೇಕು ಎಂದು ಕರೆ ನೀಡಿದರು.
ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ, ಭಾಷಣ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಎಸ್.ಆರ್ ಮತ್ತು ಸಿಂಧೂ ಶಶೀಂದ್ರನ್, ಅಕಾಡೆಮಿಕ್ ಸಂಘಟಕಿ ಶೀನಾ ಕೆ.ಪಿ ಉಪಸ್ಥಿತರಿದ್ದರು. ಪೋಷಕರು,ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳಾದ ಅನಿರುದ್ಧ ರಜಿತ್ ಸ್ವಾಗತಿಸಿ, ಅಪೇಕ್ಷ ಕೆ.ಬಿ.ವಂದಿಸಿದರು. ಅನ್ವಿತಾ ಎಸ್.ರಾವ್ ಕಾರ್ಯಕ್ರಮ ನಿರೂಪಿಸಿದರು.

.jpeg)
.jpeg)
.jpeg)
