ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ವಿಜೃಂಭಣೆಯಿಂದ ನಡೆಯಿತು. ಮಂಗಲ್ಪಾಡಿ ಗ್ರಾ.ಪಂ. ಸದಸ್ಯ ಅಬ್ದುಲ್ ರಹಮಾನ್. ಟಿ. ಯಂ ಅವರು ಮುಖ್ಯ ಶಿಕ್ಷಕಿಯವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಗೈದು ಗೌರವ ವಂದನೆ ಸ್ವೀಕರಿಸಿದರು. ಬಳಿಕ ನಡೆದ ಸಭಾ ಕ್ರಮದಲ್ಲಿ ಎಂ.ಪಿ.ಟಿ. ಅಧ್ಯಕ್ಷೆ ಸುಷ್ಮಾ
ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಶುಭಾಶಂಸನೆಗೈದು ದೇಶಭಕ್ತಿ ಹಾಗೂ ಒಗ್ಗಟ್ಟಿನ ಮಹತ್ವವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಶಾಲಾ ಎಂ.ಪಿ.ಟಿ.ಉಪಾಧ್ಯಕ್ಷೆ ಪಾತಿಮತ್ ಝಹೀದಾ, ಅಂಗನವಾಡಿ ಕಾರ್ಯಕರ್ತೆ ಆಶಾ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಮುಹಮ್ಮದ್ ಅಶರ್ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ, ನೃತ್ಯ, ಭಾಷಣ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಹಿರಿಯ ಶಿಕ್ಷಕ ರಿಯಾಸ್ ಪೆರಿಂಗಡಿ ಸ್ವಾಗತಿಸಿ, ಶಿಕ್ಷಕಿ ಐಶ್ವರ್ಯ ವಂದಿಸಿದರು. ಶಿಕ್ಷಕ ಅಬ್ದುಲ್ ಬಶೀರ್ ನಿರೂಪಿಸಿದರು.




.jpg)
