HEALTH TIPS

79th Independence Day: ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು ವಿಶೇಷ ಅತಿಥಿ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆಯಲಿರುವ 79ನೇ ಸ್ವಾತಂತ್ರ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಆರೈಕೆ ಸಂಸ್ಥೆಗಳಲ್ಲಿರುವವರು, ಪಿಎಂ ಕೇರ್ಸ್‌ ಅಡಿ ನೆರವು ಪಡೆಯುತ್ತಿರುವ ಮಕ್ಕಳು ಮತ್ತು ಮಹಿಳಾ ಪರ ಕಾರ್ಯಕರ್ತೆಯರು ಪಾಲ್ಗೊಳ್ಳಲಿದ್ದಾರೆ.

ದೇಶದಾದ್ಯಂತ ಮಕ್ಕಳು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ 171 ಮಂದಿ, ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ಮಾಡುವುದನ್ನು ಮತ್ತು ದೇಶವನ್ನು ಉದ್ದೇಶಿಸಿ ಮಾತನಾಡುವುದನ್ನು ನೇರವಾಗಿ ಕಣ್ತುಂಬಿಕೊಳ್ಳಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಸತ್‌, ಪ್ರಧಾನ ಮಂತ್ರಿ ಸಂಗ್ರಹಾಲಯ, ಕರ್ತವ್ಯಪಥ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಲು ಇವರಿಗೆ ಅವಕಾಶ ನೀಡಲಾಗಿದೆ. ಪ್ರಧಾನ ಮಂತ್ರಿಯವರ 'ಮಕ್ಕಳ ಮತ್ತು ಮಹಿಳೆಯರ ಸಬಲೀಕರಣದಿಂದ ದೇಶದ ನಿಜವಾದ ಏಳಿಗೆ ಸಾಧ್ಯ' ಎನ್ನುವ ಆಶಯದ ಪ್ರತಿನಿಧಿಯಾಗಿ ಇವರನ್ನು ಕರೆಸಲಾಗುತ್ತಿದೆ. ಪ್ರಧಾನಿಗಳ ಆಶಯದ ನೈಜ ಉದಾಹರಣೆಯಾಗಿ ಈ ವಿಶೇಷ ಅತಿಥಿಗಳು ನಮ್ಮ ಮುಂದೆ ಬಾಳ್ವೆ ಮಾಡುತ್ತಿದ್ದಾರೆ. ಸಮಾಜದಲ್ಲಿ ತಳಮಟ್ಟದಲ್ಲಿಯೂ ಅವರು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಅನೇಕ ಕುಟುಂಬಗಳಿಗೆ ಗೌರವ, ಹೊಸ ಭರವಸೆ, ಅವಕಾಶವನ್ನು ತಂದುಕೊಟ್ಟಿದೆ. ದೇಶವನ್ನು ಕಟ್ಟಲು ನೆರವಾಗುತ್ತಿರುವ ಇವರನ್ನು ಸ್ವಾತಂತ್ರ್ಯ ದಿನದಂದು ಗುರುತಿಸುವ ಮೂಲಕ ಅವರ ಕೊಡುಗೆಯನ್ನು ಸಂಭ್ರಮಿಸುವ ವಿಧಾನವಾಗಿದೆ ಎಂದು ಸಚಿವೆ ಅನ್ನಪೂರ್ಣ ದೇವಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries