ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರ ಹೆಸರನ್ನು ಅಂತಿಮಗೊಳಿಸಿದೆ.
ಹೆಸರು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ 'ಇಂಡಿಯಾ' ಒಕ್ಕೂಟದ ಸದಸ್ಯ ಪಕ್ಷಗಳ ಮುಖಂಡರು ಮಂಗಳವಾರ ಸಭೆ ಸೇರಿದ್ದರು.
ಸುದರ್ಶನ್ ರೆಡ್ಡಿ ಅವರು 1993ರಲ್ಲಿ ಆಂಧ್ರಪ್ರದೇಶದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2005ರಲ್ಲಿ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾದರು. 2007ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. 2011ರಲ್ಲಿ ಇವರು ನಿವೃತ್ತರಾದರು.
ಚಂದ್ರಯಾನ-1 ಯೋಜನೆ ಮುನ್ನಡೆಸಿದ್ದ ಇಸ್ರೊದ ಮಾಜಿ ವಿಜ್ಞಾನಿ ಮೈಲಸ್ವಾಮಿ ಅಣ್ಣಾದೊರೈ ಸೇರಿದಂತೆ ಹಲವು ಹೆಸರುಗಳ ಬಗ್ಗೆ ಚರ್ಚೆ ನಡೆದಿತ್ತು. ಅಂತಿಮವಾಗಿ
ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಭಾನುವಾರ ಆಯ್ಕೆ ಮಾಡಲಾಗಿದೆ.

