ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಇದೇ ವೇಳೆ ತಾವು ಈಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅಲಾಸ್ಕದಲ್ಲಿ ನಡೆಸಿದ ಸಭೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.
ಟ್ರಂಪ್ ಜತೆಗಿನ ಸಭೆಯಲ್ಲಿ ಉಕ್ರೇನ್-ರಷ್ಯಾ ನಡುವಿನ ಯುದ್ಧವನ್ನು ಅಂತ್ಯಗೊಳಿಸುವ ಸಲುವಾಗಿ ಮಾತುಕತೆ ನಡೆಸಲಾಯಿತು ಎಂಬ ಮಾಹಿತಿಯನ್ನು ಪುಟಿನ್, ಮೋದಿಗೆ ವಿವರಿಸಿದ್ದಾರೆ.
'ದೂರವಾಣಿ ಕರೆ ಮೂಲಕ ಸಂಭಾಷಣೆ ನಡೆಸಿ, ಅಲಾಸ್ಕದಲ್ಲಿ ನಡೆದ ಸಭೆ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗೆಳೆಯ ಪುಟಿನ್ ಅವರಿಗೆ ಧನ್ಯವಾದಗಳು' ಎಂದು ಮೋದಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಭಾರತ ಹಿಂದಿನಿಂದಲೂ ಹೇಳುತ್ತಲೇ ಇದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಗೂ ನಮ್ಮ ಬೆಂಬಲ ಇರಲಿದೆ' ಎಂದೂ ಮೋದಿ ಹೇಳಿದ್ದಾರೆ.
Thank my friend, President Putin, for his phone call and for sharing insights on his recent meeting with President Trump in Alaska. India has consistently called for a peaceful resolution of the Ukraine conflict and supports all efforts in this regard. I look forward to our Show more

