HEALTH TIPS

ರಕ್ತದೊತ್ತಡ: ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಆಸ್ಪತ್ರೆಗೆ ದಾಖಲು

ಕೊಲಂಬೊ: ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ (76) ಅವರನ್ನು ಶನಿವಾರ ಕಾರಾಗೃಹದ ಆಸ್ಪತ್ರೆಗೆ ದಾಖಲಿಸಲಾಗಿದೆ.

'ರನಿಲ್‌ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಜೈಲು ವಕ್ತಾರ ತಿಳಿಸಿದ್ದಾರೆ.

ಕೊಲಂಬೊ ಫೋರ್ಟ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರನಿಲ್‌ ಅವರಿಗೆ ಜಾಮೀನು ನೀಡಲು ನಿರಾಕರಿಸಿ, ಅವರಿಗೆ ಆಗಸ್ಟ್‌ 26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ, ಶುಕ್ರವಾರ ಮಧ್ಯರಾತ್ರಿಯೇ ಅವರನ್ನು ಜೈಲಿಗೆ ಕರೆದೊಯ್ಯಲಾಗಿತ್ತು .

ತಮ್ಮ ಅಧಿಕಾರವಧಿಯಲ್ಲಿ ಬೊಕ್ಕಸದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಲ್ಲಿ ಸಿಂಘೆ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries