ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಮಂಗಲ್ಪಾಡಿ ಗ್ರಾಮ ಪಂಚಾಯತಿ ವತಿಯಿಂದ ನೂತನವಾಗಿ ಸ್ಥಾಪಿಸಲಾದ ಬೀದಿದೀಪವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರುಬಿನ ನೌಫಲ್ ಅವರು ಸೋಮವಾರ ಉದ್ಘಾಟಿಸಿದರು. ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ ಇಕ್ಬಾಲ್, ಗ್ರಾ.ಪಂ. ಸದಸ್ಯ ಅಬ್ದುಲ್ ರೆಹಮಾನ್ ಟಿ.ಎಂ, ಮಂಜೇಶ್ವರ ವಿದ್ಯಾಧಿಕಾರಿ ಜಾರ್ಜ್ ಕ್ರಾಸ್ತಾ. ಸಿ.ಎಚ್, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯೆ ಸುಜಾತಾ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ, ಪಿ.ಟಿ.ಎ. ಉಪಾಧ್ಯಕ್ಷ ಇಂತಿಯಾಸ್ ಉಪಸ್ಥಿತರಿದ್ದರು.

.jpg)
