ಬದಿಯಡ್ಕ: ಬಿಜೆಪಿ ಕೇರಳ ಉತ್ತರವಲಯ ಪದಾಧಿಕಾರಿಗಳು ಗೋಕರ್ಣದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತಾನುಷ್ಠಾನದಲ್ಲಿರುವ ಶ್ರೀರಾಮಚಂದ್ರಾಪುರ ಮಠಾಧೀಶ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರನ್ನು ಭೇಟಿಯಾಗಿ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ಉತ್ತರವಲಯ ಅಧ್ಯಕ್ಷ ವಕೀಲ ಕೆ. ಶ್ರೀಕಾಂತ್, ವಲಯ ಉಪಾಧ್ಯಕ್ಷ ವಿಜಯ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಮಂಜೇಶ್ವರ ಮಂಡಲ ಸಮಿತಿ ಪ್ರಮುಖರಾದ ಸುಬ್ರಮಣ್ಯ ಭಟ್ ನಾಯರ್‍ಪಳ್ಳ ಜೊತೆಗಿದ್ದರು. ಹರ್ಷವನ್ನು ವ್ಯಕ್ತಪಡಿಸಿದ ಶ್ರೀಗಳು ಶಾಲು ಹೊದೆಸಿ ಮಂತ್ರಾಕ್ಷತೆಯನ್ನಿತ್ತು ಹರಸಿದರು.

.jpg)
