ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ರಕ್ಷಾ ಬಂಧನ ಶನಿವಾರ ಆಚರಿಸಲಾಯಿತು. ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಭಟ್ ಬೆಜಪ್ಪೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಕ್ಷಾಬಂಧನ ಆಚರಿಸುವುದರ ಉದ್ದೇಶವನ್ನು ತಿಳಿಸಿದರು. ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿ ರಕ್ಷಾಬಂಧನದ ಸಂದೇಶವನ್ನು ಸಿಹಿತಿಂಡಿಯೊಂದಿಗೆ ಹಂಚಿಕೊಂಡರು.
ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಆಡಳಿತ ಸಮಿತಿಯ ಸದಸ್ಯ ಶ್ಯಾಮರಾಜ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ವಿದ್ಯಾ ಹೆಗಡೆ ಕಾರ್ಯಕ್ರಮವನ್ನು ನಿರೂಪಿಸಿದರು.




.jpg)
