ನವದೆಹಲಿ: ವಿಪಕ್ಷಗಳ ಗದ್ದಲ - ಪ್ರತಿಭಟನೆಯ ನಡುವೆಯು ಎರಡು ಕ್ರೀಡಾ ಮಸೂದೆಗಳನ್ನು ಲೋಕಸಭೆ ಸೋಮವಾರ ಅಂಗೀಕರಿಸಿತು.
ಬಿಹಾರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹಾಗೂ ಮತಗಳ್ಳತನದ ಕುರಿತು ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಸಂಸತ್ತಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದವು.
ಈ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಸೋಮವಾರ ಸಂಕ್ಷಿಪ್ತ ಚರ್ಚೆಯ ಬಳಿಕ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ ಮತ್ತು ರಾಷ್ಟ್ರೀಯ ಡೋಪಿಂಗ್ ವಿರೋಧಿ ಕಾಯ್ದೆ ಕ್ರೀಡಾ ಮಸೂದೆಗಳನ್ನು ಅಂಗೀಕರಿಸಿತು.




