ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಭಾರತೀಯ ನೌಕಾಪಡೆಯ ಮಾಜಿ ಕಮಾಂಡರ್ ಪ್ರಸನ್ನ ಎಡೆಯಿಲ್ಲಮ್ ಧ್ವಜಾರೋಹಣಗೈದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯಬೇಕು ಎಂದರು.
ಶಾಲಾ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯೆ ರುಕಿಯ ಸಿದ್ದಿಕ್, ಪಿ.ಟಿ.ಎ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ಎಂ.ಪಿ.ಟಿ.ಎ ಅಧ್ಯಕ್ಷೆ ಮಿಸ್ರಿಯ, ಎಸ್.ಎಂ.ಸಿ ಅಧ್ಯಕ್ಷ ಹಮೀದ್ ಶುಭಾಸಂನೆಗೈದರು. ಮುಖ್ಯೋಪಾಧ್ಯಾಯಿನಿ ಮೃದುಲ ಸ್ವಾಗತಿಸಿ, ಪ್ರಾಂಶುಪಾಲ ರಮೇಶ್ ವಂದಿಸಿದರು. ಅಧ್ಯಾಪಕ ಬ್ರಿಜೇಶ್ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.




.jpg)
.jpg)
