ಕಾಸರಗೋಡು: ರಾಜ್ಯ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು(ಡಿಟಿಪಿಸಿ) ಸೆಪ್ಟೆಂಬರ್ 1 ರಿಂದ 7 ರವರೆಗೆ ಚೆರುವತ್ತೂರಿನಲ್ಲಿ ಆಯೋಜಿಸಲಿರುವ ಜಿಲ್ಲಾ ಮಟ್ಟದ ಓಣಂ ಆಚರಣೆಯ ಯಶಸ್ವಿಗಾಗಿ ಸಂಘಟನಾ ಸಮಿತಿ ರಚನಾ ಸಭೆ ನಡೆಯಿತು.
ಶಾಸಕ ಎಂ.ರಾಜಗೋಪಾಲನ್ ಸಮಾರಂಭ ಉದ್ಘಾಟಿಸಿದರು. ಚೆರುವತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ವಿ. ಪ್ರಮೀಳಾ ಅಧ್ಯಕ್ಷತೆ ವಹಿಸಿದ್ದರು. ವಲಿಯಪರಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ವಿ. ಸಜೀವನ್, ಸಹಾಯಕ ಜಿಲ್ಲಾಧಿಕಾರಿ ಲಿಪು ಎಸ್.ಲಾರೆನ್ಸ್, ಜಿಲ್ಲಾ ವಾರ್ತಾ ಮತ್ತು ಮಾಹಿತಿ ಅಧಿಕಾರಿ ಎಂ. ಮಧುಸೂಧನನ್, ಹೊಸದುರ್ಗ ತಹಶೀಲ್ದಾರ್ ಜಿ. ಸುರೇಶ್ ಬಾಬು ಉಪಸ್ಥಿತರಿದ್ದರು. ಡಿಟಿಪಿಸಿ ಕಾರ್ಯದರ್ಶಿ ಜೆ.ಕೆ. ಜಿಜೇಶ್ ಕುಮಾರ್ ಸ್ವಾಗತಿಸಿದರು. ಪ್ರವಾಸೋದ್ಯಮ ಇಲಾಖೆ ಪ್ರತಿನಿಧಿ ಅಂಜು ವಂದಿಸಿದರು.
ಸಂಸದ ರಾಜಮೋಹನ್ ಉಣ್ಣಿತ್ತಾನ್, ಶಾಸಕರಾದ ಸಿ.ಎಚ್. ಕುಂಞಂಬು, ಎನ್.ಎ. ನೆಲ್ಲಿಕುನ್ನು, ಎ.ಕೆ.ಎಂ. ಅಶ್ರಫ್, ಇ. ಚಂದ್ರಶೇಖರನ್ ಪ್ರಧಾನ ಸಂಚಾಲಕರಾಗಿರುವ ಸಮಿತಿಯನ್ನು ರಚಿಸಲಾಯಿತು. ಶಾಸಕ ಎಂ. ರಾಜಗೋಪಾಲನ್ ಅಧ್ಯಕ್ಷ, ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಕನ್ವೀನರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಪಿ. ಬೇಬಿ ಬಾಲಕೃಷ್ಣನ್, ಪರಪ್ಪ ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಎಂ.ಲಕ್ಷ್ಮಿ, ನೀಲೇಶ್ವರಂ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಮಾಧವನ್ ಮಣಿಯರ, ಚೆರುವತ್ತೂರು ಪಂಚಾಯಿತಿ ಅಧ್ಯಕ್ಷ ಸಿ.ವಿ. ಪ್ರಮೀಳಾ ಅವರು ಉಪಾಧ್ಯಕ್ಷರು,
ಪ್ರವಾಸೋದ್ಯಮ ಉಪನಿರ್ದೇಶಕ ಎ. ನಸೀಬ್ ಮತ್ತು ಡಿಟಿಪಿಸಿ ಕಾರ್ಯದರ್ಶಿ ಜೆ.ಕೆ. ಜಿನೇಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ಸಹ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ, ಸ್ವಾಗತ, ಪ್ರಚಾರ, ಸ್ವಯಂಸೇವಕ, ಪ್ರಾಯೋಜಕತ್ವ, ಕ್ರೀಡೆ ಮತ್ತು ಮೆರವಣಿಗೆಗಾಗಿ ಉಪಸಮಿತಿಗಳನ್ನು ಸಹ ರಚಿಸಲಾಯಿತು.





