ಮಂಜೇಶ್ವರ: ಮೂಡಂಬೈಲು ಅಪ್ಪತ್ತಿಮಾರಿನಲ್ಲಿ ಇತ್ತೀಚೆಗೆ ಜರಗಿದ ಯಕ್ಷಬಳಗ ಹೊಸಂಗಡಿ ತಂಡದ ಕರ್ಕಾಟಕ ಮಾಸ ಯಕ್ಷಗಾನ ತಾಳಮದ್ದಳೆ ಕೂಟ ಸಮಾರೋಪ ಸಮಾರಂಭದಲ್ಲಿ ತೆಂಕುತಿಟ್ಟಿನ ಹಿರಿಯ ಹಿಮೇಳ ವಾದಕ, ಗುರು ಭಾಸ್ಕರ ಕೋಳ್ಯೂರು ಅವರನ್ನು ಗಣ್ಯರ ಸಮಕ್ಷಮ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಶಿವರಾಮ ಪದಕಣ್ಣಾಯ ಅಪ್ಪತ್ತಿಮಾರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು, ವೇದಮೂರ್ತಿ ದಡ್ಡಂಗಡಿ ಬಾಲಕೃಷ್ಣ ಭಟ್, ಯೋಗೀಶ ರಾವ್ ಚಿಗುರುಪಾದೆ, ವೇದಮೂರ್ತಿ ಚೇತನರಾಮ ಪಜಿಂಗಾರು, ನ್ಯಾಯವಾದಿ ವಿಠಲ ಭಟ್ ಮೊಗಸಾಲೆ, ನಾಗರಾಜ ಪದಕಣ್ಣಾಯ ಮೂಡಂಬೈಲು, ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಲೇಖಕ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್, ಶಂಭುಶರ್ಮ ವಿಟ್ಲ ಮುಂತಾದವರು ಉಪಸ್ಥಿತರಿದ್ದರು.

.jpg)
