ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಹಾಗೂ ಮಹೇಶ್ವರೀ ಮಹಿಳಾ ಸಮಾಜ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಪುಟಾಣಿಗಳಿಗಾಗಿ ಶ್ರೀಕೃಷ್ಣ ವೇಷ ಸ್ಪರ್ಧೆ ಆ. 15ರಂದು ಜರುಗಲಿದೆ.
ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ದೇವಸ್ಥಾನದ ಅರ್ಚಕ ವೇದಮೂರ್ತೀ ಚಂದ್ರಶೇಖರ ನಾವಡ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಈ ಸಂದರ್ಭ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆ, ಮಧ್ಯಾಹ್ನ 12ಕ್ಕೆ 5ವರ್ಷ ಪ್ರಾಯದೊಳಗಿನ ಮಕ್ಕಳಿಗೆ ಶ್ರೀಕೃಷ್ಣ ವೇಷಸ್ಪರ್ಧೆ ನಡೆಯುವುದು. ಮಧ್ಯಾಹ್ನ 1ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೇಂಗಪದವು ಶ್ರೀ ಗಿರಿಜಾಂಬಾ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೆ. ಶಿವಕುಮಾರ್ ಧಾರ್ಮಿಕ ಭಾಷಣ ಮಾಡುವರು. ಕ್ಲಬ್ ಅಧ್ಯಕ್ಷ ಚಂದ್ರಶೇಖರ ಅಮೆಕ್ಕಳ ಅಧ್ಯಕ್ಷತೆ ವಹಿಸುವರು. ಎಣ್ಮಕಜೆ ಗ್ರಾಮ ಪಂಚಾಯಿತಿ ಸದಸ್ಯೆ ಉಷಾಗಣೇಶ್ ಬಹುಮಾನ ವಿತರಿಸುವರು. ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಶ್ಯಾನುಭಾಗ್, ಮಹೇಶ್ವರೀ ಮಹಿಳಾ ಸಮಾಜದ ಅಧ್ಯಕ್ಷೆ ರಾಧಾ ರೈ ಬಜಕೂಡ್ಲು ಉಪಸ್ಥಿತರಿರುವರು.




