ಕಾಸರಗೋಡು: ಕನ್ನಡ ಹೋರಾಟಗಾರ, ಮಾಜಿ ಶಾಸಕ, ವಕೀಲ ದಿ.ಯು.ಪಿ ಕುಣಿಕುಳ್ಳಾಯ ಸಂಸ್ಮರಣಾ ಸಮಾರಂಭ ಆ.13 ರಂದು ಸಂಜೆ 4.30ಕ್ಕೆ ಕಾಸರಗೋಡಿನ ಬೀರಂತಬೈಲಿನಲ್ಲಿರುವ ಕನ್ನಡ ಅಧ್ಯಾಪಕ ಭವನದಲ್ಲಿ ನಡೆಯಲಿರುವುದು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವುದು.
ಕರ್ನಾಟಕ ಸಮಿತಿ ಅಧ್ಯಕ್ಷ, ವಕೀಲ ಕೆ. ಮುರಳೀಧರ ಬಳ್ಳಕ್ಕುರಾಯ ಸಂಸ್ಕರಣಾ ಭಾಷಣ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು.
ಕ.ಸಾ.ಪ ಮಾಜಿ ಗೌರವ ಕಾರ್ಯದರ್ಶಿ ಬಿ. ರಾಮಮೂರ್ತಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ.ಎ, ಕ.ಸಾ.ಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು, ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಪಾಲ್ಗೊಳ್ಳುವರು.





