ಕಾಸರಗೋಡು: ಶಿರಿಬಾಗಿಲು ಮಂಜತ್ತಡ್ಕದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದಿದ್ದ ಪೇರಾಲ್ ಕಣ್ಣೂರು ಚೋಡಾಲ ನಿವಾಸಿ ಮಂಚ ಎಂಬವರ ಪುತ್ರ ಉಮೇಶ(31)ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಮೇಶ ಅವರು ಗುರುವಾರ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದಿದ್ದು, ಇವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯಸ್ಥಿತಿ ಹದಗೆಡುತ್ತಿದ್ದ ಹಿನ್ನೆಲೆಯಲ್ಲಿ ನಂತರ ಇವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲಿಲ್ಲ. ಉಮೇಶ ಅವರ ಅಸಹಜ ಸಾವಿನ ಬಗ್ಗೆ ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

