ಕಾಸರಗೋಡು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಸುಳ್ಳು ಪ್ರಚಾರದ ವಿರುದ್ಧ ಕಾಸರಗೋಡಿನ ಶ್ರೀಧರ್ಮಸ್ಥಳ ಕ್ಷೇತ್ರ ಭಕ್ತವೃಂದದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಕಾಸರಗೋಡು ನಗರದಲ್ಲಿ ಜರುಗಿತು. ನಗರದ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಆರಂಭಗೊಂಡ ಮೆರವಣಿಗೆ, ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತ್ತು. ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ನೂರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸಮಾರೋಪ ಸಮಾರಂಭದಲ್ಲಿ ವಿವಿಧ ಸಂಘಟನೆಗಳ ಗಣ್ಯರು ಉಪಸ್ಥಿತರಿದ್ದರು. ಹಿಂದು ಐಕ್ಯ ವೇದಿಯ ಕಾಸರಗೋಡು ಜಿಲ್ಲಾಧ್ಯಕ್ಷ ಎಸ್. ಪಿ. ಶಾಜಿ, ವಿಶ್ವ ಹಿಂದೂ ಪರಿಷತ್ತಿನ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ. ವೆಂಕಟ್ರಮಣ ಹೊಳ್ಳ, ಹಿಂದು ಐಕ್ಯ ವೇದಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜನ್ ಮುಳಿಯಾರ್, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ ಮಾವಿನಕಟ್ಟೆ, ಜಿಲ್ಲಾ ಕೋಶಾಧಿಕಾರಿ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಬಿ.ಎಂ.ಎಸ್ ಜಿಲ್ಲಾ ಜತೆ ಕಾರ್ಯದರ್ಶಿ ದಿನೇಶ್ ಬಂದ್ಯೋಡು, ಹಿಂದು ಐಕ್ಯ ವೇದಿಯ ಜಿಲ್ಲಾ ಕಾರ್ಯಾಧ್ಯಕ್ಷ ಗೋಪಾಲಕೃಷ್ಣನ್ ತಚ್ಚಂಗಾಡ್, ಹಿರಿಯ ಧಾರ್ಮಿಕ ಮುಖಂಡ ಜಯಾನಂದಕುಮಾರ್ ಹೊಸದುರ್ಗ, ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ಅಧ್ಯಕ್ಷ ಗುರು ಪ್ರಸಾದ್ ಕೋಟೆಕಣಿ ಉಪಸ್ಥಿತರಿದ್ದರು.
ಧರ್ಮಸ್ಥಳ ಕ್ಷೇತ್ರವು ಶತಮಾನಗಳಿಂದ ಸಮಾಜಕ್ಕೆ ಆಧ್ಯಾತ್ಮಿಕ, ಸಾಂಸ್ಕøತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸುತ್ತಿದ್ದು, ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಸುಳ್ಳು ಪ್ರಚಾರ ಹಾಗೂ ಅಪಚಾರವನ್ನು ಯಾವುದೇ ಮಾತ್ರಕ್ಕೂ ಸಹಿಸುವುದಿಲ್ಲ. ಧಾರ್ಮಿಕ ಪರಂಪರೆಯ ಸಂರಕ್ಷಣೆ ಮತ್ತು ಭಕ್ತರ ಏಕತೆ ಕಾಲದ ಅವಶ್ಯಕತೆಯಘಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕ್ಷೇತ್ರದ ಭಕ್ತವೃಂದ, ವಿವಿಧ ಹಿಂದು ಸಂಘಟನೆಗಳ ಸದಸ್ಯರು, ಮಹಿಳೆಯರು, ಯುವಕರು ಹಾಗೂ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


