ಸಮರಸ ಚಿತ್ರಸುದ್ದಿ: ಕಾಸರಗೋಡು: ತಿರುವನಂತಪುರದ ತೈಕಾಡ್ ಭಾರತ್ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕೇರಳ ಸರ್ಕಾರದ ಭಾರತ್ ಭವನ ತಿರುವನಂತಪುರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಲೇಖಕ, ಅನಿವಾಸಿ ಭಾರತೀಯ ಶಿವಾನಂದ ಕೋಟ್ಯಾನ್ ಕಟಪಾಡಿ ಅವರು ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ರಚಿಸಿದ 'ಗುರುದರ್ಶನ'ಕೃತಿಯನ್ನು ಕೇರಳ ರಾಜ್ಯ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಬಿಡುಗಡೆಗೊಳಿಸಿದರು. ಪ್ರದೀಪ್‍ಕುಮಾರ್ ಕಲ್ಕೂರ, ಲೇಖಕ ಶಿವಾನಂದ ಕೋಟ್ಯಾನ್ ಕಟಪಾಡಿ, ಶ್ರೀಧರ ಶೆಟ್ಟಿ ಮುಟ್ಟಂ, ಎ.ಆರ್ ಸಉಬ್ಬಯ್ಯಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.


