ಕಾಸರಗೋಡು: ಕುಂಡಂಗುಳಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಮುಖ್ಯ ಶಿಕ್ಷಕ ಥಳಿಸಿದ ಪರಿಣಾಮ ವಿದ್ಯಾರ್ಥಿಯ ಕರ್ಣ ತಮ್ಮಟೆಗೆ ಹಾನಿಯಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ಹಕ್ಕು ಆಯೋಗ ಸ್ವಯಂಪ್ರೇರಿತವಾಗಿ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ವಿದ್ಯಾರ್ಥಿ ಮೇಲೆ ನಡೆದಿರುವ ದೌರ್ಜನ್ಯ ವಿರೋಧಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಕುಂಡಂಗುಳಿ ಸರ್ಕಾರಿ ಹೈಯರ್ ಸಎಕೆಂಡರಿ ಶಾಲೆ ಎದುರು ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಮಡು ಪರಿಸ್ಥಿತಿ ತಿಳಿಗೊಳಿಸಿದರು.




