ನವದೆಹಲಿ: ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಪರಿಹಾರಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನೆಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಫೋನ್ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
'ನನ್ನ ಗೆಳೆಯ, ಅಧ್ಯಕ್ಷ ಮ್ಯಾಕ್ರನ್ ಜತೆಗೆ ಉತ್ತಮ ಮಾತುಕತೆ ನಡೆಯಿತು.
ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ಶಾಂತಿಯುತವಾಗಿ ಪರಿಹರಿಸುವ ಕುರಿತು ಪರಸ್ಪರ ವಿಚಾರಗಳನ್ನು ಹಂಚಿಕೊಂಡೆವು' ಎಂದು ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
'ಭಾರತ- ಫ್ರಾನ್ಸ್ ನಡುವಿನ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ಬದ್ಧರಾಗಿದ್ದೇವೆ ಎಂಬುದನ್ನು ದೃಢಪಡಿಸಲಾಯಿತು' ಎಂದೂ ಅವರು ಹೇಳಿದ್ದಾರೆ.




