ತಿರುವನಂತಪುರಂ: ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಬಿ ನೆಲಮಾಳಿಗೆ ತೆರೆಯುವ ಸುದ್ದಿ ನಕಲಿ ಎಂದು ಕೇಂದ್ರ ಸರ್ಕಾರದ ಪ್ರತಿನಿಧಿ ಕರಮಣ ಜಯನ್ ಹೇಳಿದ್ದಾರೆ.
ನಿನ್ನೆ ನಡೆದ ಸಭೆ ದೈನಂದಿನ ಚಟುವಟಿಕೆಗಳ ಭಾಗವಾಗಿತ್ತು. ಕರಮಣ ಜಯನ್ ಮಾಧ್ಯಮಗಳಿಗೆ ನೀಡಿದ ಮಾಹಿತಿಯ ಪ್ರಕಾರ, ನೆಲಮಾಳಿಗೆ ತೆರೆಯುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಿರುವರು.
ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಬಿ ವಾಲ್ಟ್ ತೆರೆಯುವ ಬಗ್ಗೆ ಮತ್ತೆ ಚರ್ಚೆಗಳು ಪ್ರಾರಂಭವಾಗಿವೆ ಎಂಬ ಸುಳ್ಳು ಸುದ್ದಿ ವ್ಯಾಪಕವಾಗಿ ಹರಡಿತು. ಆಡಳಿತ ಮಂಡಳಿ ಮತ್ತು ಸಲಹಾ ಸಮಿತಿಯ ಜಂಟಿ ಸಭೆಯಲ್ಲಿ ವಾಲ್ಟ್ ತೆರೆಯುವ ಬಗ್ಗೆ ಚರ್ಚೆಗಳು ಬಂದಿವೆ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿ ಚರ್ಚೆಗಳನ್ನು ಪ್ರಾರಂಭಿಸಿದ್ದಾರೆ ಎಂಬ ಊಹಾಪೆÇೀಹಗಳಿದ್ದವು.




