ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯಿತಿಯ ಕುಟುಂಬ ಆರೋಗ್ಯ ಕೇಂದ್ರದ 7ನೇ ವಾರ್ಡಿನಲ್ಲಿ ಬಲೆಕ್ಕಳದ ಕಾರ್ತಿಕ ಕೃಷ್ಣ ಭಟ್ ಎಂಬವರ ಪತ್ನಿ ಪ್ರೀತಿ ಭಟ್ ಅವರ ಗರ್ಭಾವಸ್ಥೆಯ ಸಂದರ್ಭದಲ್ಲಿ ಸರ್ಕಾರದಿಂದ ಲಭಿಸಬೇಕಾದ ಸಹಾಯದಿಂದ ವಂಚಿತರಾಗಿದ್ದಾರೆ. ಇದಕ್ಕೆ ಆಶಾ ಕಾರ್ಯಕರ್ತೆಯ ಕರ್ತವ್ಯ ಲೋಪವೆಂದು ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಆರೋಪಿಸಿದೆ.
ಗರ್ಭಿಣಿಯಾದ ಸಂದರ್ಭದಲ್ಲಿ ಅವರ ಮನೆಗೆ ತೆರಳಿ ನೀಡಬೇಕಾದ ಸಲಹೆ ಹಾಗೂ ಸಹಾಯವನ್ನು ನೀಡದೇ ಆರೋಗ್ಯ ಕೇಂದ್ರದಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳನ್ನು ನೀಡದೇ ಈ ಕುಟುಂಬವು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಿಂದ ವಂಚಿತರಾಗಿದ್ದಾರೆ. ಇದಕ್ಕೆ ಆಶಾ ಕಾರ್ಯಕರ್ತೆಯೇ ನೇರ ಹೊಣೆಯಾಗಿದ್ದಾರೆ. ಅದ್ದರಿಂದ ಅವರನ್ನು ತಕ್ಷಣ ಕೆಲಸದಿಂದ ತೆಗೆದು ಹಾಕಿ ಸೂಕ್ತ ಆಶಾ ಕಾರ್ಯಕರ್ತೆಯನ್ನು ನೇಮಿಸಬೇಕೆಂದು ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ.

