ಬದಿಯಡ್ಕ: 79ನೇ ಸ್ವಾತಂತ್ರ್ಯೋತ್ಸವವನ್ನು ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಉನ್ನತ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ ವಿಶೇಷ ಅಸೆಂಬ್ಲಿಯಲ್ಲಿ ಧ್ವಜ ವಂದನೆಯನ್ನು ಮಾಡಲಾಯಿತು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಟರಾಜ ಕಲ್ಲಕಳಂಬಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಸದಸ್ಯ ಹರೀಶ್ ಗೋಸಾಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಹವಿಲ್ದಾರ್ (ನಿವೃತ್ತ) ರವೀಂದ್ರನಾಥ ಭಟ್ ಕಾಕುಂಜೆ, ತಮ್ಮ ಅನುಭವಗಳನ್ನು ಹಂಚಿಕೊಂಡರು.
ಶಾಲಾ ವ್ಯವಸ್ಥಾಪಕ ನಾರಾಯಣ ಶರ್ಮಾ ಬಿ, ಪ್ರಾಂಶುಪಾಲ ಸತೀಶ ವೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ ಭಟ್ ಚೋಕೆಮೂಲೆ ಮತ್ತು ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಮೇಶ್ ಕೃಷ್ಣ ಪದ್ಮಾರ್ ಶುಭಾಶಂಸನೆಗೈದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಸ್ಕೌಟ್-ಗೈಡ್ಸ್ ಮತ್ತು ಲಿಟಲ್ ಕೈಟ್ಸ್ ವಿದ್ಯಾರ್ಥಿಗಳು ಪ್ರತ್ಯೇಕ ಕಾರ್ಯಕ್ರಮಗಳನ್ನು ನೀಡಿದರು. ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಆಸಕ್ತ ವಿದ್ಯಾರ್ಥಿಗಳು ನಿವೃತ್ತ ಯೋಧರೊಂದಿಗೆ ಸಂವಾದ ನಡೆಸಿದರು. ಮುಖ್ಯೋಪಾಧ್ಯಾಯ ಗಿರೀಶ್ ಎನ್ ಸ್ವಾಗತಿಸಿ, ಸ್ಕೌಟ್ ಅಧ್ಯಾಪಕ ಹರಿನಾರಾಯಣ ಎಸ್ ವಂದಿಸಿದರು. ರಕ್ಷಕ ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಅಧ್ಯಾಪಕ, ಅಧ್ಯಾಪಕೇತರ ವೃಂದದವರು ಸಕ್ರಿಯವಾಗಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಸಿಹಿ ತಿಂಡಿ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.




.jpg)
