ಇಂಫಾಲ್: ಮಣಿಪುರದ ತೌಬಾಲ್ ಮತ್ತು ಇಂಫಾಲ್ ಜಿಲ್ಲೆಗಳಲ್ಲಿ ನಿಷೇಧಿತ ಸಂಘಟನೆಯ ಐವರು ಬಂಡುಕೋರರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಯ ಸಿಬ್ಬಂದಿ ಗುರುವಾರ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ನಿಷೇಧಿತ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಾರ್ಟಿಯ ತೈಬಾಂಗಂಬಾ ಬಣದ ಮೂವರು ಮಹಿಳೆಯರು ಸೇರಿದಂತೆ ನಾಲ್ಕು ಸಕ್ರಿಯ ಸದಸ್ಯರನ್ನು ತೌಬಾಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ನಿಷೇಧಿತ ಪ್ರಿಪಾಕ್ (ಪಿಆರ್‌ಇಪಿಎಕೆ) ಸಂಘಟನೆಯ ಸಕ್ರಿಯ ಸದಸ್ಯರೊಬ್ಬರನ್ನು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಇಂಫಾಲ್ ಪೂರ್ವ ಜಿಲ್ಲೆಯ ಪ್ರದೇಶವೊಂದರಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.




