ಪೆರ್ಲ: ಎಣ್ಮಕಜೆ ಪಂಚಾಯಿತಿ ಖಂಡಿಗೆ ನಿವಾಸಿ, ಪ್ರಸಕ್ತ ಪಳ್ಳಕ್ಕಾನದಲ್ಲಿ ವಾಸಿಸುತ್ತಿರುವ ನಿವೃತ್ತ ಮುಖ್ಯ ಶಿಕ್ಷಕ ಗೋವಿಂದ ನಾಯ್ಕ್(80)ದೀರ್ಘ ಕಾಲದ ಅಸೌಖ್ಯದಿಂದ ನಿಧನರಾದರು. ಅವರು ವಾಣೀನಗರ, ಬಂಬ್ರಾಣ, ಬೇಳ ಸೇರಿದಂತೆ ವಿವಿಧೆಡೆ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಅವರು ಕಾಸರಗೋಡು ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಮಾಜಿ ಅಧ್ಯಕ್ಷರಾಗಿದ್ದರು. ಅವರು ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.


