ಬದಿಯಡ್ಕ: ಪೆರಡಾಲ ಶ್ರೀಉದನೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ಆ. 17 ರಂದು ಶ್ರೀ ಕ್ಷೇತ್ರದಲ್ಲಿ ನಡೆಯುವ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ, ಶಕ್ತಿ ಪಂಚಾಕ್ಷರಿ ಯಾಗ ಮತ್ತು ಆಗಸ್ಟ್ 24 ರಂದು ನಡೆಯುವ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆಯ ಆಮಂತ್ರಣ ಪತ್ರವನ್ನು ಶ್ರೀ ಉದನೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಗೌರವ ರಕ್ಷಾಧಿಕಾರಿ ಪೂಜ್ಯ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಗೆ ನೀಡಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭ ಆಡಳಿತ ಮೊಕ್ತೇಸರ ವೆಂಕಟರಮಣ ಭಟ್ ಚಂಬಲ್ತಿಮಾರ್, ಮೊಕ್ತೇಸರ ಪಿ.ಜಿ ಜಗನ್ನಾಥ ರೈ, ಸೀತಾರಾಮ ನವಕಾನ, ಕೋಶಾಧಿಕಾರಿ ಸೂರ್ಯನಾರಾಯಣ. ಬಿ, ಕಾರ್ಯದರ್ಶಿ ನಿರಂಜನ್ ರೈ ಪೆರಡಾಲ ಉಪಸ್ಥಿತರಿದ್ದರು.




.jpg)
