ಕಾಸರಗೋಡು: ಜಿಲ್ಲೆಯ ನಾನಾ ಕಡೆ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಮೊಸರುಕುಡಿಕೆ, ಶ್ರೀಕೃಷ್ಣ ವೇಷ ಸ್ಪರ್ಧೆ, ವಿವಿಧ ಕಲಾ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿತು.
ಪೆರ್ಲ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಹಾಗೂ ಮಹೇಶ್ವರೀ ಮಹಿಳಾ ಸಮಾಜ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಪುಟಾಣಿಗಳಿಗಾಗಿ ಶ್ರೀಕೃಷ್ಣ ವೇಷ ಸ್ಪರ್ಧೆ ಜರುಗಿತು.
ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ದೇವಸ್ಥಾನದ ಅರ್ಚಕ ವೇದಮೂರ್ತೀ ಚಂದ್ರಶೇಖರ ನಾವಡ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆ, ಮಧ್ಯಾಹ್ನ 12ಕ್ಕೆ 5ವರ್ಷ ಪ್ರಾಯದೊಳಗಿನ ಮಕ್ಕಳಿಗೆ ಶ್ರೀಕೃಷ್ಣ ವೇಷಸ್ಪರ್ಧೆ ನಡೆಯಿತು. ಮಧ್ಯಾಹ್ನ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೇಂಗಪದವು ಶ್ರೀ ಗಿರಿಜಾಂಬಾ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೆ. ಶಿವಕುಮಾರ್ ಧಾರ್ಮಿಕ ಭಾಷಣ ಮಾಡಿದರು. ಕ್ಲಬ್ ಅಧ್ಯಕ್ಷ ಚಂದ್ರಶೇಖರ ಅಮೆಕ್ಕಳ ಅಧ್ಯಕ್ಷತೆ ವಹಿಸಿದ್ದರು. ಎಣ್ಮಕಜೆ ಗ್ರಾಮ ಪಂಚಾಯಿತಿ ಸದಸ್ಯೆ ಉಷಾಗಣೇಶ್ ಬಹುಮಾನ ವಿತರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಶ್ಯಾನುಭಾಗ್, ಮಹೇಶ್ವರೀ ಮಹಿಳಾ ಸಮಾಜದ ಅಧ್ಯಕ್ಷೆ ರಾಧಾ ರೈ ಬಜಕೂಡ್ಲು ಉಪಸ್ಥಿತರಿದ್ದರು.
ಪಾವೂರು ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ (ರಿ) ಬಜಾಲ್ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಿತು.
ಬೆಳಿಗ್ಗೆ 10ಕ್ಕೆ ಮೊಸರು ಕುಡಿಕೆ ಕಾರ್ಯಕ್ರಮವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಮನೋಹರ್ ಶೆಟ್ಟಿ ಕೆದುಂಬಾಡಿ ಉದ್ಘಾಟಿಸಿದರು. ನಂತರ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.
ಮುಳ್ಳೇರಿಯ ಕೋಳಿಕ್ಕಾಲು ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಮಂಜೇಶ್ವರ ಮೊರತ್ತಣೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 46ನೇ ವರ್ಷದ ಸಆರ್ವಜನಿಕ ಮೊಸರುಕುಡಿಕೆ ಉತ್ಸವ ನಡೆಯಿತು. ಆನೆಕಲ್ಲು ಶ್ರೀ ಸಂತಾನಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಘಿ ವಿವಿಧ ಆಟೋಟ ಸ್ಪರ್ಧೆ, ಮುದ್ದುಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು.
ಪೆರ್ಲ ಬಜಕೂಡ್ಲು ಶ್ರೀ ಮಹಾಳಿಂಗೇಶ್ವರ ದೇವಸ್ಥಾನದಲ್ಲಿ ಕ್ಲಬ್ ವತಿಯಿಂದ ಮಕ್ಕಳಿಗಾಗಿ ಕೃಷ್ಣವೇಷ ಸ್ಪರ್ಧೆ ಜರುಗಿತು.


