ಕಾಸರಗೋಡು: ಸಾರ್ವಜನಿಕ ಗಣೇಶೋತ್ಸವ ಸಂದರ್ಭ ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ನಿಯಂತ್ರಣ ಹೇರಿದೆ. ಬೈಕ್ ಸೇರಿದಂತೆ ವಾಹನಗಳ ರ್ಯಾಲಿ ಮತ್ತು ಡಿಜೆ ಬಳಕೆಗೆ ಅವಕಾಶವಿರುವುದಿಲ್ಲ. ಆದೇಶ ಮೀರಿ ಬಳಸುವ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಹಾಗೂ ಇತರ ವಾಹನಗಳಿಗೆ ಅಡಚಣೆಯಾಗದ ರೀತಿಯಲ್ಲಿ ಮೆರವಣಿಗೆ ಏರ್ಪಡಿಸಬೇಕು. ಮೈಕ್ ಅನುಮತಿಯನ್ನು ಮುಂಚಿತವಾಗಿ ಪಡೆದಿರಬೇಕು. ಧ್ವನಿವರ್ಧಕ ಬಾಕ್ಸ್‍ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸುವುದು ಅಥವಾ ಅನುಮತಿ ನೀಡಿದ ಡೆಸಿಬಲ್‍ಗಿಂತ ಹೆಚ್ಚಿನ ಮಟ್ಟದಲ್ಲಿ ಬಳಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಚರಣೆಗಳು ದೋಷರಹಿತವಾಗಿ ನಡೆಯುವಂತೆ ನೋಡಿಕೊಳ್ಳಲು ಪೆÇಲೀಸರು ಮಾಡಿರುವ ವ್ಯವಸ್ಥೆಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರಕಟಣೆ ತಿಳಿಸಿದೆ.

