HEALTH TIPS

ರೆಡ್ ಅಲರ್ಟ್ : ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ

ಕಾಸರಗೋಡು: ಆಗಸ್ಟ್ 6 ಬುಧವಾರ ಕಾಸರಗೋಡು ಜಿಲ್ಲೆಗೆ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಧಿಕಾರಿಗಳು ಆಗಸ್ಟ್ 6 ಬುಧವಾರ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು, ಬೋಧನಾ ಕೇಂದ್ರಗಳು, ಮದರಸಾಗಳು, ಅಂಗನವಾಡಿಗಳು ಮತ್ತು ವಿಶೇಷ ತರಗತಿಗಳಿಗೆ ರಜೆ ಅನ್ವಯಿಸುತ್ತದೆ.

ಈ ಹಿಂದೆ ಘೋಷಿಸಲಾದ ಎಲ್ಲಾ ಪರೀಕ್ಷೆಗಳು (ವೃತ್ತಿಪರ, ವಿಶ್ವವಿದ್ಯಾಲಯ ಮತ್ತು ಇತರ ಇಲಾಖಾ ಪರೀಕ್ಷೆಗಳು ಸೇರಿದಂತೆ) ನಿಗದಿಯಂತೆ ನಡೆಯಲಿವೆ. ಪರೀಕ್ಷಾ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ.

ವಿವರಗಳಿಗಾಗಿ:

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾಸರಗೋಡು ದೂರವಾಣಿ: +91 94466 01700 ಸಂಪರ್ಕಿಸಲು ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries