ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಈ ವೇಳೆ ಮತ್ತಿಬ್ಬರು ಯೋಧರು ಗಾಯಗೊಂಡಿದ್ದು, ಗಾಯಗೊಂಡ ಭದ್ರತಾ ಸಿಬ್ಬಂದಿ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ದೇಶಕ್ಕಾಗಿ ಕರ್ತವ್ಯ ನಿರ್ವಹಿಸುವಾಗ ವೀರ ಯೋಧರಾದ ಎಲ್/ಎನ್‌ಕೆ ಪ್ರೀತ್ಪಾಲ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಹುತಾತ್ಮರಾಗಿದ್ದಾರೆ. ಅವರ ಧೈರ್ಯ ಮತ್ತು ಸಮರ್ಪಣೆ ನಮಗೆ ಸ್ಫೂರ್ತಿಯಾಗಿದೆ' ಎಂದು 'ಚಿನಾರ್ ಕಾರ್ಪ್ಸ್' ಸಂತಾಪ ವ್ಯಕ್ತಪಡಿಸಿದೆ.
ಅರಣ್ಯ ಪ್ರದೇಶದ ದುರ್ಗಮ ಸ್ಥಳಗಳಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್ ಹಾಗೂ ಹೆಲಿಕಾಪ್ಟರ್‌ಗಳು ಸೇರಿದಂತೆ ಎಲ್ಲ ವಿಧಾನಗಳನ್ನೂ ಬಳಸುತ್ತಿವೆ ಎಂದು ಪ್ರತೀಕ್ ಶರ್ಮಾ ತಿಳಿಸಿದ್ದಾರೆ.

