ಕುಂಬಳೆ: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕøತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ 'ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ'ಎಂಬ ಕಾರ್ಯಕ್ರಮದ ಅಂಗವಾಗಿ ಸಾಹಿತಿ ವಿಜಯಾ ಸುಬ್ರಹ್ಮಣ್ಯ ಕುಂಬಳೆ ಅವರನ್ನು ನಾರಾಯಣ ಮಂಗಲದಲ್ಲಿರುವ ಅವರ ನಿವಾಸ 'ಕಾರ್ತಿಕೇಯ'ದಲ್ಲಿ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ಅಧ್ಯಕ್ಷತೆ ವಹಿಸಿ, ವಿಜಯಾ ಸುಬ್ರಹ್ಮಣ್ಯ ಅವರನ್ನು ಶಾಲು ಹೊದಿಸಿ ಅಭಿನಂದಿಸಿದರು.
ಹಿರಿಯ ಸಾಹಿತಿ ವಿ.ಬಿ ಕುಳಮರ್ವ ಅಭಿನಂದನಾ ಭಾಷಣ ಮಾಡಿದರು. ವಿಜಯಾ ಸುಬ್ರಹ್ಮಣ್ಯ ಅವರು ಕೊಡಗಿನ ಗೌರಮ್ಮ ಕಥಾಸ್ಪರ್ಧೆಯ ಸಂಚಾಲಕಿಯಾಗಿ, ಮುಜುಂಗಾವಿನ ಭಾರತೀ ವಿದ್ಯಾಲಯದ ಗ್ರಂಥ ಪಾಲಕಿಯಾಗಿ ಅವರು ಸಲ್ಲಿಸಿದ ಸೇವೆ ಅನುಪಮವಾದುದು. 'ಹೊಂಗಿರಣ' ಕಥಾ ಸಂಕಲನ, 'ವಿಜಯ ವಿಕಾಸ '-ಆತ್ಮಕಥೆ ಸೇರಿದಂತೆ ವೈವಿಧ್ಯ ಪೂರ್ಣವಾದ ಹಲವು ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಅವರ ಪುರಾಣ ಪುನೀತೆಯರು, ಪುರಾಣ ಪುರುಷರತ್ನಗಳು ಮೊದಲಾದ ಅಂಕಣಗಳು ವಿದ್ಯಾರ್ಥಿಗಳಲ್ಲಿ ಪುರಾಣಗಳ ಕುರಿತು ಆಸಕ್ತಿ ಮೂಡಿಸಿ ಅವರಲ್ಲಿ ಓದುವ ಹವ್ಯಾಸವನ್ನು ಬೆಳೆಸಿದೆ ಎಂದು ತಿಳಿಸಿದರು.
ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ. ಎನ್ ಮೂಡಿತ್ತಾಯ, ಖ್ಯಾತ ಕತೆಗಾರ್ತಿ ಸ್ನೇಹಲತಾ ದಿವಾಕರ್, ವಕೀಲ ಥಾಮಸ್ ಡಿ'ಸೋಜ ,ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಲಲಿತಾಲಕ್ಷ್ಮಿ, ವೆಂಕಟ ಕೃಷ್ಣ ಶಂಕರ ಮೂಲೆ, ಸುನೀತಿ ಮುಜುಂಗಾವು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.






