ಕಾಸರಗೋಡು: ನಗರದ ಜನರಲ್ ಆಸ್ಪತ್ರೆಯ ಬಗ್ಗೆ ಕಾಸರಗೋಡು ನಗರಸಭೆ ತೋರುತ್ತಿರುವ ನಿರ್ಲಕ್ಷ್ಯವನ್ನು ಕೊನೆಗೊಳಿಸುವಂತೆ ಒತ್ತಾಯಿಸಿ ಡಿವೈಎಫ್‍ಐ ಕಾಸರಗೋಡು ಬ್ಲಾಕ್ ಸಮಿತಿ ವತಿಯಿಂದ ನಗರಸಭಾ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಿತು.
ಜನರಲ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಪೂರೈಕೆಯನ್ನು ಪುನರಾರಂಭಿಸುವಂತೆ ಆಗ್ರಹಿಸಿ ಡಿವೈಎಫ್‍ಐ ಕಾಸರಗೋಡು ಬ್ಲಾಕ್ ಸಮಿತಿಯ ನೇತೃತ್ವದಲ್ಲಿ ಧರಣಿ ಆಯೋಜಿಸಲಾಗಿತ್ತು. ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ರಾಜೀಶ್ ವೆಳ್ಳಾಟ್ ಧರಣಿ ಉದ್ಘಾಟಿಸಿದರು. ಬ್ಲಾಕ್ ಸಮಿತಿ ಅಧ್ಯಕ್ಷ ವಿ ಮಿಥುನ್‍ರಾಜ್ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಸಮಿತಿ ಕೋಶಾಧಿಕಾರಿ ಪ್ರವೀಣ್ ಪಾಡಿ, ಅಜಿತ್ ಪಾರೆಕಟ್ಟ, ವಿನಯನ್ ಚಟಪಾಡಿ, ಸಬೀನ್ ಬಟ್ಟಂಪಾರ, ಮಾರ್ಟಿನ್ ಇ, ಮತ್ತು ಅಶ್ವತಿ ಉಪಸ್ಥಿತರಿದ್ದರು. ಬ್ಲಾಕ್ ಕಾರ್ಯದರ್ಶಿ ಸುಭಾಷ್ ಪಾಡಿ ಸ್ವಾಗತಿಸಿದರು. ಪೊಲೀಸರ ತಡೆ ಭೇದಿಸಿ ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಮಹಿಳೆಯರ ಸಹಿತ ಹಲವು ಮಂದಿ ಧರಣಿಯಲ್ಲಿ ಪಾಲ್ಗೊಂಡಿದ್ದರು.


