ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಮಹಿಳಾ ವೃಂದದ ನೇತೃತ್ವದಲ್ಲಿ ಹತ್ತನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ಶುಕ್ರವಾರ ಜರಗಿತು.
ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು. ನೂರಾರು ಮಾತೆಯರು ಭಕ್ತಿ ಶ್ರದ್ಧೆಯಿಂದ ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡರು.

.jpg)
