ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲ ರಾಮಚಂದ್ರ ಭಟ್ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತವಾಗಿ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಶೋಕ್ ಭಂಡಾರಿ ವಹಿಸಿದ್ದರು. ಮುಖ್ಯೋಪಾಧ್ಯಾಯ ಶಶಿಕುಮಾರ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಹೈಯರ್ ಸೆಕೆಂಡರಿ ಪ್ರಾಂಶುಪಾಲ ರಾಮಚಂದ್ರ ಭಟ್ ಮಾತನಾಡಿ, ದೇಶದ ಅಭಿವೃದ್ದಿಯಲ್ಲಿ ವಿದ್ಯಾರ್ಥಿಗಳು ಶಾಲಾ ದಿನದಿಂದಲೇ ಶಿಸ್ತು ಪ್ರಾಮಾಣಿಕತೆ ರಾಷ್ಟ್ರಭಕ್ತಿಯನ್ನು ಮೈಗೂಡಿಕೊಂಡು ಮುನ್ನಡೆಯಬೇಕಾದ ಅಗತ್ಯವನ್ನು ತಿಳಿಸಿದರು. ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಮಾತನಾಡಿ, ನಮಗೆ ದೇಶದ ವಿರಯೋಧರ ತ್ಯಾಗ ಬಲಿದಾನಗಳು ಆದರ್ಶವಾಗಬೇಕು. ಸತ್ಪ್ರಜೆಯಾಗಿ ಬದುಕಿ ದೇಶದ ಏಳಿಗೆಗೆ ಬೆಂಬಲವಾಗಬೇಕು ಎಂದರು.
ಶಿಕ್ಷಕಿ ಸುನೀತಾ ಕೆ.ಸ್ಟಾಗತಿಸಿ, ವಿಚೇತ ವಂದಿಸಿದರು. ಅಧ್ಯಾಪಕ ಶಿವಪ್ರಸಾದ್ ಚೆರುಗೋಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯದಿನದ ಸಾಂಸ್ಕøತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಿಹಿತಿಂಡಿಯನ್ನು ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.




.jpg)
.jpg)
