ಕಾಸರಗೋಡು: ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯರನ್ನಾಗಿ ಬಿಜೆಪಿಯ ಹಿರಿಯ ಸದಸ್ಯೆ, ಕಾಸರಗೋಡು ನಗರಸಭಾ ಸದಸ್ಯೆ ಸವಿತಾ ಟೀಚರ್ ಅವರನ್ನು ಆಯ್ಕೆ ಮಾಡಿದೆ. ನಿವೃತ್ತ ಮುಖ್ಯ ಶಿಕ್ಷಕಿಯಾಗಿರುವ ಇವರು ಬಿಜೆಪಿಯ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.





