ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಭಾರತೀಯ ಸೈನ್ಯಾಧಿಕಾರಿ ವಿಘ್ನೇಶ್ ಬೇಂಗತ್ತಡ್ಕ ಧ್ವಜಾರೋಹಣಗೈದು ಮಾತನಾಡಿದರು. ಬಳಿಕ ಶಾಲಾ ವಿಭಾಗದಲ್ಲಿ ನಡೆದ ರಸಪ್ರಶ್ನೆ, ಸಂಘಗಾನ, ಭಾಷಣ, ಸಂಘನೃತ್ಯ ಇತ್ಯಾದಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಪ್ರಕೃತಿ ರೈ ಸ್ವಾಗತಿಸಿ, ಸಾನ್ವಿ ವಂದಿಸಿದರು.ವಿದ್ಯಾರ್ಥಿಗಳಾದ ಸಾಗರ್ ಮತ್ತು ಸಮರ್ಥ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಆಡಳಿತ ಮಂಡಳಿ, ರಕ್ಷಕ ಶಿಕ್ಷಕ ಸಂಘ ಮತ್ತಿತರ ಸಮಿತಿಗಳ ಸದಸ್ಯರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




.jpg)
