ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶನಿವಾರ ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು ಮತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ಆಶ್ರಯದಲ್ಲಿ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ಅನ್ನಪೂರ್ಣ ವೇದಿಕೆಯಲ್ಲಿ ನಡೆಯಿತು.
ಸಮಾರಂಭವನ್ನು ಮಿತ್ತೂರು ಪುರುಷೋತ್ತಮ ಭಟ್ ಉದ್ಘಾಟಿಸಿ ಶುಭಹಾರೈಸಿದರು. ಬಿ.ವಿ ಕುಳಮರ್ವ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಕೆ. ಪದ್ಮನಾಭ ಶೆಟ್ಟಿ ಚಕ್ಕಿತ್ತಡ್ಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಶ್ಯಾಮ ಭಟ್ಟ ಕುಂಚಿನಡ್ಕ, ರಾಮಕೃಷ್ಣ ಕಾಟುಕುಕ್ಕೆ ಮತ್ತಿತರರು ಉಪಸ್ಥಿತರಿದ್ದರು. ಲೋಕನಾಥ ಶೆಟ್ಟಿ ಮಾಯಿಲೇಂಗಿ ಸ್ವಾಗತಿಸಿ, ಕೋಡುಮಾಡು ಸುಬ್ರಹ್ಮಣ್ಯ ಭಟ್ ವಂದಿಸಿದರು. ಬಳಿಕ ಗಮಕ ವಾಚನ-ಪ್ರವಚನ ಕಾರ್ಯಕ್ರಮ ನಡೆಯಿತು. ಶ್ರೀ ಗೋಪಾಲಕೃಷ ಭಟ್ ಕೊಚ್ಚಿ ವಾಚಿಸಿದರು. ಶ್ರೀಹರಿ ಭಟ್ ಪೆಲತ್ತಾಜೆ ವ್ಯಾಖ್ಯಾನ ನೀಡಿದರು.




.jpg)
