ಬದಿಯಡ್ಕ: ಜಗದ್ಗುರು ಶಂಕರಾಚಾರ್ಯ ಸಂಸ್ಥಾನಮ್ ಶ್ರೀ ಎಡನೀರು ಮಠದಲ್ಲಿ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಗೆ ಉಪ್ಲೇರಿ ಶ್ರೀ ಮಂತ್ರಮೂರ್ತಿ ಗುಳಿಗ ಸನ್ನಿಧಿಯಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಪ್ರಧಾನ ಕರ್ಮಿ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲು ದಂಪತಿಗಳು ಪಾದಪೂಜೆ ನೆರವೇರಿಸಿದರು. ಡಾ. ಶ್ರೀನಿಧಿ ಸರಳಾಯ ಬದಿಯಡ್ಕ, ಗೋಪಾಲಕೃಷ್ಣ ಪೈ ಬದಿಯಡ್ಕ, ಕೃಷ್ಣ ಬೆಳ್ಚಪ್ಪಾಡ, ಜಗನ್ನಾಥ ರೈ ಕೊರೆಕ್ಕಾನ, ರಾಮನಾಯ್ಕ ಕುಂಟಾಲುಮೂಲೆ, ರಮೇಶ್ ಮುಳಿಯಡ್ಕ, ಸುಕುಮಾರ ಉಪ್ಲೇರಿ, ಶಿವರಾಮ ಸಾಲಿಯಾನ್ ಹಾಗೂ ಸುಮಂಗಲಿ ಮಾತೃಸಂಘದ ಸದಸ್ಯರು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದುಕೊಂಡರು.

.jpg)
.jpg)
