ಕುಂಬಳೆ: ಶ್ರೀ ಭಾರತಿ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿಯು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಬ್ರಿಗೇಡಿಯರ್ ಐ. ಎನ್. ರೈ ಕಾರಿಂಜ ಧ್ವಜಾರೋಹಣಗೈದು, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದಲ್ಲಿ ದೇಶಸೇವೆ ಮತ್ತು ದೇಶದ ರಕ್ಷಣೆಯ ಬಗ್ಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಬಗ್ಗೆ ಗಮನಹರಿಸಬೇಕೆಂದು ಕರೆ ನೀಡಿದರು.
ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಪುಟಾಣಿ ಮಕ್ಕಳು ಮುದ್ದುಕೃಷ್ಣರಾಗಿ ನೆರೆದವರ ಮನಸ್ಸಿಗೆ ಮುದ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಸಿದ ರಸಪ್ರಶ್ನೆ ಸ್ಪರ್ಧೆ ಹಾಗೂ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ, ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಐ.ಎನ್. ರೈ ಅವರನ್ನು ವಿದ್ಯಾಲಯದ ವತಿಯಿಂದ ಗೌರವಿಸಲಾಯಿತು.
ಅಧ್ಯಾಪಿಕೆ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ಹೆಗಡೆ ಸ್ವಾಗತಿಸಿ, ಕು.ರಕ್ಷಿತಾ ವಂದಿಸಿದರು.




.jpg)
.jpg)
.jpg)
