ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಧ್ವಜಾರೋಹಣ ನಡೆಸಿದರು. ಎನ್‍ಸಿಸಿ ವಿದ್ಯಾರ್ಥಿಗಳಿಂದ ಪೆರೇಡ್ ನಡೆಯಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ ಜೆ.ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಿವೃತ್ತ ಅಗ್ನಿಶಾಮಕ ದಳ ಅಧಿಕಾರಿ ಮನೋಹರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ ಕೆನರಾ ಬ್ಯಾಂಕಿನ ಸಿಎಸ್‍ಆರ್ ಫಂಡ್ ಬಳಸಿ ಶಾಲಾ ಪರಿಶಿಷ್ಟ ಜಾತಿ-ಪ.ವರ್ಗ ವಿದ್ಯಾರ್ಥಿಗಳಿಗೆ ಕೊಡಮಾಡಲಾದ ವಿದ್ಯಾರ್ಥಿ ವೇತನವನ್ನು ಬ್ಯಾಂಕಿನ ಪೆರ್ಲ ಶಾಖಾ ಪ್ರಬಂಧಕ ಶ್ರೀಜಿತ್ ಹಸ್ತಾಂತರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಗ್ನಿಶಾಮಕ ದಳದ ನಿವೃತ್ತ ಅಧಿಕಾರಿ ಮನೋಹರನ್ ಪೆರ್ಲ ಹಾಗೂ ಕೆನರಾ ಬೇಂಕ್ ಮೇನೇಜರ್ ಶ್ರೀಜಿತ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಪೆರ್ಲ, ಎಂಪಿಟಿಎ ಅಧ್ಯಕ್ಷೆ ಗೀತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಣವಿ ಸ್ವಾಗತಿಸಿದರು. ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಶಿಖಾ ವಂದಿಸಿದರು. ಸಮಾರಂಭದಲ್ಲಿ ಮಾದಕ ವಸ್ತು ವಿರೋಧಿ ಪ್ರತಿಜ್ಞೆ ಜೈಗೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ವೈವಿಧ್ಯ ಜರಗಿತು.


