ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನೂ ಆಚರಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪಿ.ಬಿ. ಅಬ್ದುಲ್ ಮಜೀದ್ ಧ್ವಜಾರೋಹಣಗೈದರು. ಪ್ರಾಂಶುಪಾಲ ವಿಜಯಕುಮಾರ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಕೃಷ್ಣವೇಣಿ ವಂದಿಸಿದರು. ಶ್ರುತಿ ಟೀಚರ್ ನಿರೂಪಿಸಿದರು.
ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಮೋಹನ್ ಮಾಸ್ತರ್, ಮಾತೃ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ, ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸದಸ್ಯ ಹಮೀದ್ ಕಣಿಯೂರ್ ಹಾಗೂ ಎಲ್ಲ ಅಧ್ಯಾಪಕರು ಉಪಸ್ಥಿತರಿದ್ದರು. ಎಲ್ಲ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

.jpg)
