ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದೊಂದಿಗೆ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘ ಮತ್ತು ಅಧ್ಯಯನ ಕೇಂದ್ರ, ಕುಂಜತ್ತೂರು ಇದರ ವತಿಯಿಂದ ಹಿರಿಯರ ನೆನಪು ಮತ್ತು ಯಕ್ಷಗಾನ ತಾಳಮದ್ದಳೆ ಕೂಟ ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಕಿನ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿ, ಮಕ್ಕಳಲ್ಲಿ ಯಕ್ಷಗಾನವನ್ನು ಉಳಿಸಿ, ಬೆಳೆಸಿ ಅದರ ಕಂಪನ್ನು ಪಸರಿಸಬೇಕು ಎನ್ನುವ ಮುಖ್ಯ ಉದ್ದೇಶದೊಂದಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ನಿರಂತರ ಕಾರ್ಯನಿರ್ವಹಿಸುತ್ತಿದೆ. ಇದರ ಅಂಗವಾಗಿ ಅಲ್ಲಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳನ್ನು ನಡೆಸುತ್ತಿದ್ದು, ಇದಕ್ಕೆ ಅನುದಾನವನ್ನು ಸಹ ಒದಗಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಕೇಂದ್ರ ಮತ್ತು ಅಧ್ಯಯನ ಕೇಂದ್ರದ ಕಾರ್ಯಕ್ರಮಗಳಿಗೆ ಮೆಚ್ಚುಗೆ ಸೂಚಿಸಿದರು.
ಇತ್ತೀಚೆಗೆ ಅಗಲಿ ಹೋದ ಸಂಘದ ಹಿರಿಯ ಸದಸ್ಯ, ಕಲಾವಿದ ಕೀರ್ತಿಶೇಷ ವೆಂಕಪ್ಪ ಪೂಜಾರಿ ಬಸ್ರಿಮಾರು ಅವರು ಇಲ್ಲಿ ಅನೇಕರಿಗೆ ಯಕ್ಷಗಾನ ಕಲಿಯಲು ಮತ್ತು ಯಕ್ಷಗಾನ ಕಲಾ ಸಂಘಟನೆಗಳನ್ನು ಮಾಡಲು ಪ್ರೇರಕರಾಗಿದ್ದರು ಎಂದು ನಿಟ್ಟೆ ಯುನಿವರ್ಸಿಟಿ ಕಮ್ಯುನಿಕೇಷನ್ ಕಾಲೇಜಿನ ಗ್ರಂಥಪಾಲಕ ದಾಮೋದರ್ ಶೆಟ್ಟಿ ಕುಂಜತ್ತೂರು, ವೆಂಕಪ್ಪ ಪೂಜಾರಿಯವರ ವ್ಯಕ್ತಿತ್ವವನ್ನು ವಿವರಿಸಿ ಸಂಸ್ಮರಣಾ ಮಾತುಗಳನ್ನಾಡಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಚಕ್ರತೀರ್ಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಸತೀಶ್ ಕುಲಾಲ್ ಉಪಸ್ಥಿತರಿದ್ದರು.
ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘ ಮತ್ತು ಅಧ್ಯಯನ ಕೇಂದ್ರದ ಸಂಚಾಲಕ ಗಣೇಶ್ ಕುಂಜತ್ತೂರು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಪೊಸಕುರಲ್ ನಿರ್ದೇಶಕ ವಿದ್ಯಾಧರ ಶೆಟ್ಟಿ ಕಾರ್ಯಕ್ರಮದ ನಿರೂಪಿಸಿದರು. ಕಾರ್ಯದರ್ಶಿ ರಮೇಶ್ ಯನ್. ಶೆಟ್ಟಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಂಘದ ಕಲಾವಿದರ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ರಾಜಸೂಯಾಧ್ವರ ಎಂಬ ಯಕ್ಷಗಾನ ತಾಳಮದ್ದಳೆ ಜರಗಿತು.

.jpg)
