ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಗಡಿಪದವು ದುರ್ಗಿಪಳ್ಳದ ಅಂಗಡಿ ವಠಾರದಲ್ಲಿ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ರಕ್ತ ಕಂಡುಬಂದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವುಂಟಾಗಿದ್ದು, ಇದರಿಂದ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಮಂಜೇಶ್ವರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎರಡು ಅಂಗಡಿಗಳ ಎದುರು ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ರಕ್ತ ಪತ್ತೆಯಾಘಿದ್ದು, ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ.




